ನಟ ಪುನೀತ್ ರಾಜ್ಕುಮಾರ್ ಅವರ ಆರೋಗ್ಯದಲ್ಲಿ ಇಂದು (ಅ.29) ಏರುಪೇರು ಉಂಟಾದ ಕಾರಣ, ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೂಲಗಳ ಪ್ರಕಾರ ಪುನೀತ್ ರಾಜಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಇದರಿಂದ ಕನ್ನಡ ಚಿತ್ರರಂಗ, ಕನ್ನಡ ನಾಡು ಅಪಾರ ನಷ್ಟಕ್ಕೊಳಗಾಗಿದ್ದು, ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ. ಪುನೀತ್ ನಿಧನವನ್ನು ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಘೋಷಿಸಲಿದ್ದಾರೆ.
ತಮ್ಮ ತಂದೆಯ ಹಾದಿಯಲ್ಲೇ ಸಾಗಿರುವ ಪುನೀತ್, ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ನಿಧನಕ್ಕೆ ನಾಡು ಅಪಾರ ಶೋಕದಲ್ಲಿ ಮುಳುಗಿದ್ದು, ಸಂತಾಪ ಸೂಚಿಸುತ್ತಿದೆ.
ಸಂಜೆ ಐದು ಗಂಟೆ ಬಳಿಕ ನಟ ಪುನೀತ್ ಮೃತದೇಹ ಕಂಠೀರವ ಕ್ರೀಡಾಗಂಣಕ್ಕೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ಸಂಜೆ ಬಳಿಕವೇ ಅಭಿಮಾನಿಗಳ ದರ್ಶನಕ್ಕೆ ಪ್ರಾರ್ಥಿವ ಶರೀರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.